ಕೊಪ್ಪಳ, ಡಿ.22 : ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ


ಜೂಡಿ ನ್ಯೂಸ್ :

ಕೊಪ್ಪಳ, ಡಿ.22 : ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ 

ಕೊಪ್ಪಳ,: ನಗರದ ಶ್ರೀ ಗವಿಸಿದ್ಧೇಶ್ವರ ಪ್ರೌಢಶಾಲೆಯ ಅವರಣದಲ್ಲಿ 1973-74ನೇ ಸಾಲಿನ ವಿದ್ಯಾರ್ಥಿ ಬಳಗದಿಂದ ಇದೇ ಡಿಸೆಂಬರ್ 22 ರವಿವಾರ ರಂದು ಬೆಳಗ್ಗೆ 9 ಗಂಟೆಗೆ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು

ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳವರು ವಹಿಸುವರು, ಹೆಚ್.ಎಸ್. ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಶಾಲೆಯ ಮುಖ್ಯೋಪಾಧ್ಯಾಯ ಅಮರೇಶ ಕರಡಿ, 1973-74ನೇ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಬಳಗ ಅಧ್ಯಕ್ಷರಾದ ವೀರಣ್ಣ ಕಮತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಸುವರು.

ಇದರ ಪ್ರಯುಕ್ತ 1973-74ನೇ ಸಾಲಿನಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಬಳಗ ವತಿಯಿಂದ ತಮಗೆ ಶಿಕ್ಷಣ ನೀಡಿದ ಗುರುಗಳಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ 50 ವರ್ಷದ ಬಳಿಕೆ ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಗೈದ ಹಳೆಯ ವಿದ್ಯಾರ್ಥಿಗಳು ಒಟ್ಟುಗೂಡಿ, ಈ ಸ್ನೇಹ ಸಮ್ಮೀಲನವು ಸುವರ್ಣ ಸಂಭ್ರಮ ಮಹೋತ್ಸವಕ್ಕೆ ಸಾಕ್ಷಿಯಾಗುತ್ತದೆ ಎಂದು 1973-74ನೇ ಸಾಲಿನಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಬಳಗದ ನೀಲಕಂಠಯ್ಯ ಹಿರೇಮಠ ಅವರು ತಿಳಿಸಿದ್ದಾರೆ.

Comments