ಜಾತಿವಾರು ಜನಗಣತಿ ವರದಿ ಬಿಡುಗಡೆಗೊಳಿಸುವಂತೆ ಹಾಗು ಪ್ರಬಲ ಜಾತಿಗಳನ್ನು ಹಿಂದುಳಿದ ವರ್ಗ 2A ನಲ್ಲಿ ಸೇರ್ಪಡೆ ಮಾಡದಂತೆ ಅಹಿಂದ ಸಂಘಟನೆಗಳ ಒಕ್ಕೂಟದಿಂದ ಮನವಿ

ಪ್ರಬಲ ಜಾತಿಗಳನ್ನು ಹಿಂದುಳಿದ ವರ್ಗ 2A ನಲ್ಲಿ ಸೇರ್ಪಡೆ ಮಾಡದಂತೆ ಅಹಿಂದ ಸಂಘಟನೆಗಳ ಒಕ್ಕೂಟದಿಂದ ಮನವಿ

ಜೂಡಿ ನ್ಯೂಸ್:

ಹೊಸಪೇಟೆ : ಸಾಮಾಜಿಕ, ಶೈಕ್ಷಣಿಕ ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡಬೇಕು. ಪ್ರಬಲ ಜಾತಿಗಳನ್ನು ಹಿಂದುಳಿದ ವರ್ಗಗಳ 2A ನಲ್ಲಿ ಯಾವುದೇ ಕಾರಣಕ್ಕೂ ಸೇರ್ಪಡೆ ಮಾಡಬಾರದು ಎಂದು ಆಗ್ರಹಿಸಿ ವಿಜಯನಗರ ಜಿಲ್ಲಾ ಅಹಿಂದ ಮತ್ತು ಶೋಷಿತ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ ) ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಬಳಿಕ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಇವರ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಶೈಕ್ಷಣಿಕ ಜಾತಿವಾರು ಜನಗಣತಿ ವರದಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಮತ್ತು ಯಾವುದೇ ಮುಂದುವರೆದ ಜನಾಂಗದವರಿಗೆ ಪ್ರ ವರ್ಗ 2-ಎ ನಲ್ಲಿ ಸೇರ್ಪಡೆ ಮಾಡಬಾರದೆಂದು ಆಗ್ರಹಿಸಿ ಇದೇ ಡಿಸೆಂಬರ್ 18 ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಲುವಾಗಿ ವಿಜಯನಗರ ಜಿಲ್ಲೆಯ ದಲಿತಪರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳು ಸಮುದಾಯದ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾ ಅಹಿಂದ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಎಂ.ಹಾಲಪ್ಪ, ವಿಜಯನಗರ ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಎಲ್.ಸಿದ್ದನಗೌಡ, ಶೋಷಿತ ಸಮುದಾಯಗಳ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಹುಡಾ ಮಾಜಿ ಅಧ್ಯಕ್ಷ ಆರ್.ಕೊಟ್ರೇಶಪ್ಪ, ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಕೆ.ರವಿಕುಮಾರ, ಎಂ.ನಾಗರಾಜ ಬಂದಿ ಬರ್ಮಪ್ಪ, ಮಜ್ಜಿಗೆ ನಾಗರಾಜ್, ಕೆ.ಬಸವರಾಜ, ಮರಡಿ ಮಂಜುನಾಥ, ಕೆ.ರಮೇಶ, ಗೋವಿಂದಪ್ಪ, ಪಲ್ಲೇದ ಸಿದ್ದೇಶ್, ಎಂ.ಡಿ. ರಫೀಕ್, ಹೊನ್ನೂರಪ್ಪ, ಹೆಚ್.ಪರಶುರಾಮ, ಜಿ.ಶಿವಕುಮಾರ, ಚಿತ್ತವಾಡಿಗೆಪ್ಪ, ನಾಗರಾಜ್, ಕೆ.ಇಮ್ತಿಯಾಜ್, ಏಕಾಂಬ್ರೇಶ ನಾಯ್ಕ, ಶಫೀ ಖುರೇಷಿ, ಡಿ. ಚನ್ನಪ್ಪ ಸೇರಿದಂತೆ ಇತರರು ಇದ್ದರು.


Comments